ಭಾರತ, ಏಪ್ರಿಲ್ 7 -- ಐಪಿಎಲ್ 2025ರ ಆವೃತ್ತಿಯಲ್ಲಿ ಕಳಪೆ ಆರಂಭ ಪಡೆದಿರುವ ಮುಂಬೈ ಇಂಡಿಯನ್ಸ್‌ ತಂಡಕ್ಕೆ, ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಆನೆಬಲ ಬಂದಿದೆ. ಟೂರ್ನಿಯಲ್ಲಿ ಈವರೆಗೆ ಕೇವಲ 1 ಪಂದ್ಯ ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ತಂಡಕ್ಕೆ ಪ್ರಬಲ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಸುದೀರ್ಘ ಅವಧಿಯಿಂದ ಗಾಯದಿಂದಾಗಿ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ, ಎರಡು ದಿನಗಳ ಹಿಂದೆಯೇ ತಂಡ ಸೇರಿಕೊಂಡಿದ್ದಾರೆ. ಅವರ ದೀರ್ಘಾವಧಿಯ ಅನುಪಸ್ಥಿತಿ ಕೊನೆಗೂ ಕೊನೆಗೊಳ್ಳಲಿದೆ. ಇಂದು (ಏಪ್ರಿಲ್‌ 7) ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಭಾಗವಹಿಸಲು ಅನುಮತಿ ಪಡೆದಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಮಾತನಾಡಿದ ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ, ಬುಮ್ರಾ ಆಯ್ಕೆಗೆ ಲಭ್ಯವಿದ್ದಾರೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ವೇಗಿ ಆಡಲಿದ್ದಾರೆ ಎಂದು...