ಭಾರತ, ಜೂನ್ 5 -- ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತ ಪ್ರಕರಣಕ್ಕೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಅವರ ತಲೆದಂಡವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ನಂತರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ...