ಭಾರತ, ಮೇ 17 -- ಐಪಿಎಲ್ 2025ರ ಎರಡನೇ ಹಂತದ ಪಂದ್ಯಗಳು ಇಂದಿನಿಂದ ಆರಂಭವಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ ಸಂಘರ್ಷದಿಂದಾಗಿ ಕೊನೆಯ ಹಂತದ ಪಂದ್ಯಗಳನ್ನು ಮುಂದೂಡಲಾಗಿತ್ತು. ಇದೀಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ (RCB vs KKR) ತಂಡಗಳ ನಡುವಿನ ಪಂದ್ಯದೊಂದಿಗೆ ಪಂದ್ಯಗಳು ಮತ್ತೆ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು (ಮೇ 17) ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಪ್ರತಿಕೂಲ ಹವಾಮಾನದಿಂದಾಗಿ ಐಪಿಎಲ್ ಪುನರಾರಂಭಕ್ಕೆ ಅಡ್ಡಿಯಾಗಬಹುದು.
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ನಿತ್ಯ ಮಳೆಯದ್ದೇ ಸುದ್ದಿ. ಉದ್ಯಾನ ನಗರಿಯಲ್ಲೂ ಸ್ವಲ್ಪಮಟ್ಟಿಗೆ ಮಳೆಯಾಗಿದೆ. ಈ ವಾರ ನಗರದಲ್ಲಿ ಮೋಡಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಿದೆ. ಇದು ಶನಿವಾರ ಸಂಜೆಯ ಪಂದ್ಯ ವೇಳೆಯೂ ಮುಂದುವರೆಯುವ ಸಾಧ್ಯತೆಗಳಿವೆ.
ಹವಾಮಾನ ವರದಿ ಪ್ರಕಾರ, ಎಂ ಚಿನ್ನಸ್ವಾಮಿ ಕ್ರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.