ಭಾರತ, ಮಾರ್ಚ್ 16 -- ಚಾಂಪಿಯನ್ಸ್‌ ಟ್ರೋಫಿ ಜೊತೆಗೆ ಡಬ್ಲ್ಯುಪಿಎಲ್‌ ಕೂಡಾ ಮುಗಿದಿದೆ. ಇನ್ನೇನಿದ್ದರೂ ಭಾರತದಲ್ಲಿ ಐಪಿಎಲ್‌ ಸಂಭ್ರಮ ಶುರು. 2025ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪೈಪೋಟಿ ನಡೆಸಲಿವೆ. ಐತಿಹಾಸಿಕ ಈಡನ್ ಗಾರ್ಡನ್ಸ್‌ ಮೈದಾನವು ಈ ಬಾರಿಯ ಐಪಿಎಲ್‌ ಪಂದ್ಯಾವಳಿಯ ಉದ್ಘಾಟನಾ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪೈಪೋಟಿಯ ನಂತರ, ಮರುದಿನ ಐಪಿಎಲ್‌ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳೆರಡು ಮುಖಾಮುಖಿಯಾಗಲಿವೆ. ಮಾರ್ಚ್ 23ರ ಭಾನುವಾರದಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಮಹತ್ವದ ಪಂದ್ಯಕ್ಕೆ ಉಭಯ ತಂಡಗಳು ಬಲಿಷ್ಠ ಆಡುವ ಬಳಗವನ್ನು ಕಣಕ್ಕಿಳಿಸಲು ಸಜ್ಜಾಗಿದೆ...