ಭಾರತ, ಫೆಬ್ರವರಿ 2 -- ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯನ್ ಓಪನ್‌ (Australian Open ಟೆನಿಸ್‌ ಟೂರ್ನಿಯಲ್ಲಿ ಭಾರತದ ರೋಹನ್ ಬೋಪಣ್ಣ ಪುರುಷರ ಡಬಲ್ಸ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ತಮ್ಮ ಜೊತೆದಾರ ಮ್ಯಾಥ್ಯೂ ಎಬ್ಡೆನ್ ಅವರೊಂದಿಗೆ ಐತಿಹಾಸಿಕ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದರು. ಬೋಪಣ್ಣ ಮತ್ತು ಎಡ್ಬೆನ್ ಜೋಡಿಯು ಫೈನಲ್‌ ಪಂದ್ಯದಲ್ಲಿ ಇಟಲಿಯ ಸಿಮೋನ್ ಬೊಲೆಲಿ, ಆಂಡ್ರಿಯಾ ವವಾಸ್ಸರಿ ಅವರನ್ನು 7-6 (7-0), 7-5 ಸೆಟ್‌ಗಳಿಂದ ಸೋಲಿಸಿದರು. ಆ ಮೂಲಕ ತಮ್ಮ 43ನೇ ವಯಸ್ಸಿನಲ್ಲಿ ಇದೇ ಮೊದಲ ಬಾರಿಗೆ ಡಬಲ್ಸ್‌ನಲ್ಲಿ ವಿಶ್ವದ ನಂಬರ್‌ 1 ಆಟಗಾರ ಎನಿಸಿಕೊಂಡರು.

ಬೋಪಣ್ಣ ಐತಿಹಾಸಿಕ ಗೆಲುವಿಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಇದೀಗ ಟೂರ್ನಿ ಮುಗಿಸಿ ಭಾರತಕ್ಕೆ ಬಂದಿರುವ ಬೋಪಣ್ಣ, ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi೦ ಭೇಟಿಯಾಗಿದ್ದಾರೆ. ಪ್ರಧಾನಿಯನ್ನು ಭೇಟಿಯಾಹದ ಟೆನಿಸ್ ಆಟಗಾರ ಸಂತೋಷಕ್ಕೆ ಪಾರವೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಬೋಪಣ್ಣ, "ಇಂದು ನಮ್ಮ ಗೌರವಾನ್ವಿತ ಪ್ರಧಾನಿ...