ಭಾರತ, ಮಾರ್ಚ್ 4 -- ಬ್ಯಾಟಿಂಗ್ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ ಸೊಗಸಾದ ಆಟದ ನೆರವಿನಿಂದ ಟೀಮ್ ಇಂಡಿಯಾ ಸತತ 3ನೇ ಹಾಗೂ ಒಟ್ಟಾರೆ 5ನೇ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿಫೈನಲ್​ನಲ್ಲಿ 4 ವಿಕೆಟ್​ಗಳಿಂದ ಜಯಿಸಿದ ರೋಹಿತ್ ಪಡೆ, 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡಿಗೆ ಮುಯ್ಯಿ ತೀರಿಸಿಕೊಂಡಿದೆ. 2000, 2002, 2013, 2017 ಮತ್ತು 2025ರಲ್ಲಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಫೈನಲ್​ನಲ್ಲಿ ಮಾರ್ಚ್​ 5ರಂದು ನಡೆಯುವ 2ನೇ ಸೆಮಿಫೈನಲ್​​​ನಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಗೆಲ್ಲುವ ತಂಡದ ವಿರುದ್ಧ ಹೋರಾಟ ನಡೆಸಲಿದೆ.

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಸ್ಟೀವ್ ಸ್ಮಿತ್ ಮತ್ತು ಅಲೆಕ್ಸ್ ಕ್ಯಾರಿ ಅವರ ಅಮೋಘ ಅರ್ಧಶತಕಗಳ ಸಹಾಯದಿಂದ 49.3 ಓವರ್​ಗಳಿಗೆ 264 ರನ್​ಗೆ ಆಲೌಟ್ ಆಯಿತು. ಮೊಹಮ್ಮದ್ ಶಮಿ ಪ್ರಮುಖ 3 ವಿಕೆ...