Bengaluru, ಮಾರ್ಚ್ 13 -- ಬೆಂಗಳೂರು: ನ್ಯಾಯಾಲಯದ ಎಚ್ಚರಿಕೆ ನಡುವೆಯೇ ಕೋರ್ಟ್‌ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.‌ ಮುನಿಯಪ್ಪ ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೌಡಾಯಿಸಿದ ಪ್ರಸಂಗ ನಡೆಯಿತು. ಇನ್ನೊಂದೆಡೆ, ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ನಟಿ ರನ್ಯಾ ರಾವ್‌ ಸಲ್ಲಿಸಿರುವ ಜಾಮೀನು ಅರ್ಜಿಯ ಭವಿಷ್ಯ ನಾಳೆ (ಮಾರ್ಚ್ 14) ನಿರ್ಧಾರವಾಗಲಿದೆ.

2013 ರಲ್ಲಿ ಚುನಾವಣೆ ಸಂದರ್ಭದಲ್ಲಿ ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ. ಶಂಕರ್ ಮೇಲೆ, ಆಗಿನ ಸಂಸದರಾಗಿದ್ದ ಮುನಿಯಪ್ಪ ಹಾಗೂ ಅವರ ಬೆಂಬಲಿಗರು ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್‌ ಸನ್ ಪೇಟೆ ಪೊಲೀಸರು ಬಿ. ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಅಂತ್ಯ ಹಾಡಿದ್ದರು. ಈ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು

ಪ್ರಕರಣದ ವಿಚಾರಣೆ ಬುಧವಾರ ಬೆಳಗ್ಗೆ ನಡೆಯಿತು. ಸಚಿವ ...