ಭಾರತ, ಏಪ್ರಿಲ್ 27 -- 2025ರ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಭಾರತದ ಆಟಗಾರರು ಬ್ಯುಸಿಯಾಗಿದ್ದಾರೆ. ಸುಮಾರು ಎರಡು ತಿಂಗಳ ಕಾಲ ನಡೆಯುವ ಈ ಶ್ರೀಮಂತ ಲೀಗ್​​​ನಲ್ಲಿ ಭಾರತ-ವಿದೇಶಿ ಅತ್ಯುತ್ತಮ ಆಟಗಾರರು ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈ ಲೀಗ್ ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಎರಡೂ ತಂಡಗಳ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗೂ ರೋಹಿತ್ ಶರ್ಮಾ ಅವರೇ ನಾಯಕನಾಗಿದ್ದಾರೆ. ಆದರೆ, ನಿವೃತ್ತಿ ವಯಸ್ಸಿನ ಆಟಗಾರನೊಬ್ಬ ಟೀಮ್ ಇಂಡಿಯಾದಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ 2024-25ನೇ ಸಾಲಿಗೆ ಟೀಮ್ ಇಂಡಿಯಾ ಆಟಗಾರರಿಗೆ ಹೊಸ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದೆ. ಕೇಂದ್ರ ಒಪ್ಪಂದದಲ್ಲಿ ಬಿಸಿಸಿಐ ನಿಯಮಿತ ನಾಯಕ ರೋಹಿತ್ ಶರ್ಮಾ ಅವರನ್ನು ಗ್ರೇಡ್ ಎ ಪ್ಲಸ್​​ನಲ್ಲಿ ಸೇರಿಸಿದೆ. ಇದರಿಂದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಇತ್ತೀಚೆಗೆ, ಪಾಡ್‌ಕ್ಯಾಸ್ಟ್‌...