ಭಾರತ, ಮೇ 22 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಕೊನೆಯ ಹಂತದಲ್ಲಿದೆ. ಇದಾಗಿ ಕೆಲವೇ ದಿನಗಳಲ್ಲಿ ಅಂದರೆ ಜೂನ್ 20ರಿಂದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್​​ ಸರಣಿಗಾಗಿ ಭಾರತ ತಂಡವು ಆಂಗ್ಲರ ನಾಡಿಗೆ ಪ್ರವಾಸ ಕೈಗೊಳ್ಳಲಿದೆ. ಭಾರತ ತಂಡವನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ. ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ? ಯಾವ ಆಟಗಾರರು ಸ್ಥಾನ ಪಡೆಯಲಿದ್ದಾರೆ? ವಿರಾಟ್ ಕೊಹ್ಲಿ ಬದಲಿಗೆ 4ನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್ ಮಾಡಲಿದ್ದಾರೆ? ರೋಹಿತ್ ನಿರ್ಗಮನದ ನಂತರ ಯಶಸ್ವಿ ಜೈಸ್ವಾಲ್​ರೊಂದಿಗೆ ಇನ್ನಿಂಗ್ಸ್ ಪ್ರಾರಂಭಿಸೋದು ಯಾರು? ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಅಭಿಮಾನಿಗಳ ಕಾತರಕ್ಕೆ ಶೀಘ್ರವೇ ತೆರೆ ಎಳೆಯಲು ಬಿಸಿಸಿಐ ಸಿದ್ಧಗೊಂಡಿದೆ. ಭಾರತ ತಂಡದ ಇಂಗ್ಲೆಂಡ್ ಪ್ರವಾಸಕ್ಕೆ ತಂಡದ ಪ್ರಕಟಣೆಗೆ ಸಂಬಂಧಿಸಿದಂತೆ ಸಂಭಾವ್ಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಬಿಸಿಸಿಐ ಮೇ 24 ರಂದು ತ...