ಭಾರತ, ಮಾರ್ಚ್ 16 -- ಇಂಟರ್‌ನ್ಯಾಷನಲ್‌ ಮಾಸ್ಟರ್ಸ್ ಲೀಗ್ ಟಿ20ಯ 2025ರ ಆವೃತ್ತಿಯಲ್ಲಿ ಇಂಡಿಯಾ ಮಾಸ್ಟರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ರಾಯ್‌ಪುರದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಮಾಸ್ಟರ್ಸ್ ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಸಚಿನ್‌ ತೆಂಡೂಲ್ಕರ್‌ ನೇತೃತ್ವದ ಭಾರತ ಮಾಸ್ಟರ್ಸ್‌ ಕ್ರಿಕೆಟ್‌ನಲ್ಲಿ ತನ್ನ ಪ್ರಾಬಲ್ಯ ಪ್ರದರ್ಶಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ ಮಾಸ್ಟರ್ಸ್‌ 7 ವಿಕೆಟ್‌ ನಷ್ಟಕ್ಕೆ 148 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಭಾರತ ಮಾಸ್ಟರ್ಸ್‌ ಕೇವಲ 17.1 ಓವರ್‌ಗಳಲ್ಲಿ ಗುರಿ ಸಾಧಿಸಿತು. ಭಾರತದ ಪರ ಫೈನಲ್‌ ಪಂದ್ಯದಲ್ಲಿ ಸ್ಫೋಟಕ ಪ್ರದರ್ಶನ ನೀಡಿದ ಅಂಬಾಟಿ ರಾಯುಡು 50 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 74 ರನ್‌ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮೊದಲು ಬ್ಯಾಟ್‌ ಮಾಡಿದ ವಿಂಡೀಸ್‌ ಪರ, ಡ್ವೇಯ್ನ್‌ ಸ್ಮಿತ್‌ 35 ಎಸೆತಗಳಲ್ಲಿ 45 ರನ್‌ ಗಳಿಸಿದರು. ...