ಭಾರತ, ಫೆಬ್ರವರಿ 10 -- ಮೈಸೂರು: ನಿಮಗೆ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದಿದ್ದರೆ ಬೇಸರ ಬೇಕಾಗಿಲ್ಲ. ಏಕೆಂದರೆ ಕರ್ನಾಟಕದಲ್ಲೂ ಅದ್ಧೂರಿ ಕುಂಭಮೇಳ ಇಂದಿನಿಂದ (ಫೆಬ್ರವರಿ 10ರ ಸೋಮವಾರ)ಆರಂಭವಾಗಲಿದೆ. ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳಕ್ಕೆ ಸಿದ್ದತೆ ಪೂರ್ಣಗೊಂಡಿದೆ. ಪವಿತ್ರ ನದಿಗಳಾದ ಕಾವೇರಿ-ಕಪಿಲಾ ನದಿಗಳ ಜತೆಗೆ ಸ್ಪಟಿಕ ಸರೋವರದ ಸಂಗಮ ತಾಣದಲ್ಲಿ ಜನರಿಗೆ ಪುಣ್ಯಸ್ನಾನದ ಅವಕಾಶ ಕಲ್ಪಿಸಲಾಗಿದೆ. ಆರು ವರ್ಷಗಳ ನಂತರ ತಿರುಮಕೂಡಲು ನರಸೀಪುರದ ಗುಂಜಾನರಸಿಂಹಸ್ವಾಮಿ ದೇಗುಲದ ಸನ್ನಿಧಿಯಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಜನರು ಹರಿದು ಬರುತ್ತಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ (ಫೆ. 10, 11, 12) ಕುಂಭಮೇಳದ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. 3 ವರ್ಷಗಳಿಗೊಮ್ಮೆ ಇಲ್ಲಿ ಕುಂಭಮೇಳ ನಡೆಯುತ್ತಿದ್ದು, ಕೋವಿಡ್‌ ಕಾರಣದಿಂದಾಗಿ 2022ರ ಕುಂಭಮೇಳ ನಡೆದಿರಲಿಲ್ಲ. ಈ ಬಾರಿ ನಡೆಯುತ್...