Bangalore, ಮಾರ್ಚ್ 2 -- ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ಎರಡೂ ಪಕ್ಷಗಳು ನಾಯಕತ್ವದ ಬಿಕ್ಕಟ್ಟು ತೀವ್ರ ಸ್ವರೂಪದ ಪರಿಣಾಮ ಪಡೆದಿರುವುದರ ನಡುವೆಯೇ ನಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೈಕ್ರೊ ಫೈನಾನ್ಸ್‌ ಬಿಲ್‌ ಮಸೂದೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹೋಳು ಮಾಡುವ ಗ್ರೇಟರ್‌ ಬೆಂಗಳೂರು ವಿಧೇಯಕ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿ ಹಾಕಲು ವಿಪಕ್ಷ ಬಿಜೆಪಿ ತುದಿಗಾಲಲ್ಲಿ ನಿಂತಿದೆ. ಮತ್ತೊಂದು ಕಡೆ ಸರ್ಕಾರ, ಕೇಂದ್ರ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ತೆರಿಗೆ ಹಣದ ಕಡಿತ, ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಬಿಜೆಪಿಯೊಳಗಿನ ಆಂತರಿಕ ಕಲಹ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷವನ್ನು ನಿಯಂತ್ರಿಸಲು ಮುಂದಾಗಿದೆ.

ಮಾರ್ಚ್‌ 3 ಸೋಮವಾರ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ಧೇಶಿಸಿ ಮಾತನಾಡುವುದರ ಮೂಲಕ ಅಧಿವೇಶನಕ್ಕೆ ಚ...