ಭಾರತ, ಮಾರ್ಚ್ 1 -- ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (Karnataka 2nd PU Exam) ಆರಂಭವಾಗುತ್ತಿದೆ. ಮೊದಲನೇ ದಿನ ಕನ್ನಡ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅಂತಿಮ ಸಿದ್ದತೆ ನಡೆಸಿದ್ದಾರೆ. ಮಾ.20ರವರೆಗೆ ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದಂತೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಎಲ್ಲಾ ಜಿಲ್ಲಾಡಳಿತಗಳು ವ್ಯವಸ್ಥೆ‌ ಮಾಡಿದೆ. ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್‌ ಕಣ್ಗಾವಲು ವ್ಯವಸ್ಥೆ ಮಾಡಿಲಾಗಿದೆ. 1000ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ನಿಗಾದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕಳೆದ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ಇದೇ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಶಿಕ್ಷಣ ಇಲಾಖೆ ಕಣ್ಣಿಟ್ಟಿದೆ. ಯಾವುದೇ ರೀತಿಯ ಸಂಭಾವ್ಯ ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಮಹ...