Chikkamagaluru, ಏಪ್ರಿಲ್ 24 -- ಚಿಕ್ಕಮಗಳೂರು: ಒಂದು ಕಾಲಕ್ಕೆ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ ನಾಯಕಿ ಇಂದಿರಾಗಾಂಧಿ ಅವರಿಗೆ ಆಪ್ತರಾಗಿ ಅವರೊಂದಿಗೆ ಗುರುತಿಸಿಕೊಂಡು ಕರ್ನಾಟಕ ಕಾಂಗ್ರೆಸ್‌ನಲ್ಲೂ ಪ್ರಭಾವಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಲ ಕಾಲ ಸಚಿವರೂ ಆಗಿದ್ದ ಬೇಗಾನೆ ರಾಮಯ್ಯ ಅವರು ಗುರುವಾರ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯಕ್ಕ ಒಳಗಾಗಿದ್ದ ಅವರಿಗೆ ಚಿಕಿತ್ಸೆ ಮುಂದುವರಿದಿತ್ತು. ಸದ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆಯಾಗಿರುವ ಕಾಂಗ್ರೆಸ್‌ ನಾಯಕಿ ಡಾ.ಆರತಿ ಕೃಷ್ಣ ಅವರ ತಂದೆಯವರಾದ ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1:45 ರ ಹೊತ್ತಿಗೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Published by HT Digital Content Services with permission from HT Kannada....