ಭಾರತ, ಏಪ್ರಿಲ್ 1 -- ತುಮಕೂರು: ನಡೆದಾಡುವ ದೇವರು ಡಾ ಶಿವಕುಮಾರ ಸ್ವಾಮಿಗಳ 118ನೇ ಜಯಂತಿ ಪ್ರಯುಕ್ತ ಶ್ರೀ ಸಿದ್ದಗಂಗಾ ಮಠದಲ್ಲಿ ಗುರುವಂದನ ಮಹೋತ್ಸವವನ್ನು ಇಂದು ಏಪ್ರಿಲ್ 1ರಂದು ಹಮ್ಮಿಕೊಳ್ಳಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವ ಹಿಸಲಿದ್ದಾರೆ. ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ.

ಶ್ರೀ ಸಿದ್ದಗಂಗಾ ಮಠಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ಆಗಮಿಸಿದ್ದಾರೆ.ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್...