ಭಾರತ, ಮಾರ್ಚ್ 7 -- ಬೆಂಗಳೂರು: ಕರ್ನಾಟಕ ವಿಧಾನ ಮಂಡಲ ಅಧಿವೇಶನ ಈಗಾಗಲೇ ಆರಂಭವಾಗಿದ್ದು, ಇಂದು (ಮಾರ್ಚ್ 7 ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. 2025-26ನೇ ಆರ್ಥಿಕ ವರ್ಷಕ್ಕೆ ಸಿದ್ದು ಲೆಕ್ಕಾಚಾರ ಇಂದು ಮಂಡನೆಯಾಗಲಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗದ ಜನರು ರಾಜ್ಯ ಬಜೆಟ್‌ ಅಧಿವೇಶನದತ್ತ ಚಿತ್ತ ಹರಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 4 ಲಕ್ಷ ಕೋಟಿ ಮೀರುವ ನಿರೀಕ್ಷೆಯಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆ, ಹೊಸ ನಿಯಮಗಳ ಜಾರಿ, ಮೂಲಸೌಕರ್ಯ ಅಭಿವೃದ್ಧಿ, ಬೆಂಗಳೂರಿನ ಅಭಿವೃದ್ಧಿ, ಬೆಲೆ ಏರಿಕೆಗೆ ಕಡಿವಾಣ ಕುರಿತು ಸಹಜವಾಗಿಯೇ ಜನರಲ್ಲಿ ಭಾರಿ ನಿರೀಕ್ಷೆಗಳಿವೆ.

ಇಂದು ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್‌ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9:45ಕ್ಕೆ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಸಭೆ ನಡೆಯಲಿದೆ. ಅಲ್ಲಿಂದ ...