Bengaluru, ಏಪ್ರಿಲ್ 8 -- PUC Result: ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಮತ್ತವರ ಪೋಷಕರು ಕಾತುರದಿಂದ ಕಾಯುತ್ತಿದ್ದ ಫಲಿತಾಂಶ ದಿನ ಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಏಪ್ರಿಲ್ 8, ಮಂಗಳವಾರ) ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಪರೀಕ್ಷೆ ಬರೆದಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ karresults.nic.in ಮತ್ತು kseab.karnataka.gov.in ನಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು. ಫಲಿತಾಂಶಗಳನ್ನು ನೀಡುವ ನೆಪದಲ್ಲಿ ಕೆಲವು ನಕಲಿ ವೆಬ್ ಸೈಟ್ ಗಳು ಆನ್ ಲೈನ್ ವಂಚನೆ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಅಧಿಕೃತ ವೆಬ್ ಸೈಟ್ ಗಳಲ್ಲಿ ಮಾತ್ರ ಫಲಿತಾಂಶಗಳನ್ನು ವೀಕ್ಷಿಸಿ. ಇಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. 2025ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.

ವಿಷಯವಾರು ಅಂಕಗಳು, ಒಟ್ಟು ಅಂಕಗಳು, ಶೇಕಡಾವಾರು, ಉತ್ತೀರ್ಣ, ಅನುತ್ತೀರ್ಣ ಎಲ್ಲಾ ಮ...