ಭಾರತ, ಏಪ್ರಿಲ್ 29 -- ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ಸಂಸ್ಥೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್‌ ಐ ಆರ್‌ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಭಾರತೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಭೋದಕ ವರ್ಗದ ಇತರ 15 ಮಂದಿ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಎಫ್‌ ಐ ಆರ್‌ ದಾಖಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಸಹಾಯಕ ಪ್ರಾಧ್ಯಾಪಕ ಡಾ. ಡಿ.ಸಣ್ಣದುರ್ಗಪ್ಪ ಜಾತಿ ಆಧಾರಿತ ಶೋಷಣೆ ಪ್ರಕರಣವನ್ನು ಕ್ರಿಸ್‌ ಮತ್ತಿತರರ ವಿರುದ್ಧ ದೂರು ದಾಖಲಿಸಿದ್ದರು.

ನ್ಯಾಯಾಲಯ ಈ ದೂರನ್ನು "ಕಾನೂನಿನ ಪ್ರಕ್ರಿಯೆಯ ದುರ್ಬಳಕೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ದೂರುದಾರರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಲು ಅನುಮತಿಯನ್ನೂ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಈ...