ಭಾರತ, ಏಪ್ರಿಲ್ 29 -- ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ಸಂಸ್ಥೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಭಾರತೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಭೋದಕ ವರ್ಗದ ಇತರ 15 ಮಂದಿ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಎಫ್ ಐ ಆರ್ ದಾಖಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಸಹಾಯಕ ಪ್ರಾಧ್ಯಾಪಕ ಡಾ. ಡಿ.ಸಣ್ಣದುರ್ಗಪ್ಪ ಜಾತಿ ಆಧಾರಿತ ಶೋಷಣೆ ಪ್ರಕರಣವನ್ನು ಕ್ರಿಸ್ ಮತ್ತಿತರರ ವಿರುದ್ಧ ದೂರು ದಾಖಲಿಸಿದ್ದರು.
ನ್ಯಾಯಾಲಯ ಈ ದೂರನ್ನು "ಕಾನೂನಿನ ಪ್ರಕ್ರಿಯೆಯ ದುರ್ಬಳಕೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ದೂರುದಾರರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಲು ಅನುಮತಿಯನ್ನೂ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಈ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.