ಭಾರತ, ಫೆಬ್ರವರಿ 14 -- ಸ್ವೀಡನ್ ಮೂಲದ ಬಸ್ ಮತ್ತು ಟ್ರಕ್ ತಯಾರಕ ಕಂಪನಿ ವೋಲ್ವೋ (Volvo), ಸಿಲಿಕಾನ್‌ ಸಿಟಿ ಬೆಂಗಳೂರು ನಗರದ ಪಕ್ಕದಲ್ಲೇ ಇರುವ ಹೊಸಕೋಟೆಯಲ್ಲಿ ತನ್ನ ಉತ್ಪಾದನಾ ಘಟಕವನ್ನು ವಿಸ್ತರಿಸಲು ನಿರ್ಧರಿಸಿದೆ. ಇದಕ್ಕಾಗಿ ಬರೋಬ್ಬರಿ 1,400 ಕೋಟಿ ರೂ. ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಗುರುವಾರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಬೃಹತ್‌ ಪ್ರಮಾಣದ ಈ ಹೂಡಿಕೆಯಿಂದ 2000ಕ್ಕೂ ಹೆಚ್ಚು ನೇರ ಉದ್ಯೋಗಗಳ ಸೃಷ್ಟಿಯಾಗುತ್ತದೆ ಎಂಬ ನಿರೀಕ್ಷೆ ಕಂಪನಿಯದ್ದು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಅವರ ಉಪಸ್ಥಿತಿಯಲ್ಲಿ ಒಪ್ಪಂದ ಪ್ರಕ್ರಿಯೆ ಪೂರ್ಣಗೊಂಡಿತು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಅವರು ಇನ್ವೆಸ್ಟ್ ಕರ್ನಾಟಕ-2025 ಶೃಂಗಸಭೆಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, 25 ವರ್ಷಗಳ ಹಿಂದೆಯೇ ವೋ...