ಭಾರತ, ಮಾರ್ಚ್ 18 -- IPL 2025: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಎರಡನೇ ಪಂದ್ಯದಲ್ಲಿ 2024ರ ಫೈನಲಿಸ್ಟ್ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 23ರಂದು ಹೈದರಾಬಾದ್‌ನಲ್ಲಿ ಪಂದ್ಯ ನಡೆಯಲಿದೆ. ಸ್ಫೋಟಕ ಬ್ಯಾಟರ್‌ಗಳ ದೊಡ್ಡ ಪಡೆಯನ್ನೇ ಹೊಂದಿರುವ ಸನ್‌ರೈಸರ್ಸ್‌ ತಂಡವು ಕಳೆದ ಬಾರಿಗಿಂತ ಈ ಬಾರಿ ತುಸು ಬದಲಾಗಿದೆ. ಪ್ಯಾಟ್‌ ಕಮಿನ್ಸ್‌ ಈ ಬಾರಿಯೂ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಕಾವ್ಯಾ ಮಾರನ್‌ ಮಾಲಕತ್ವದ ಎಸ್‌ಆರ್‌ಎಚ್‌, ಕಳೆದ ವರ್ಷ ಪ್ರಶಸ್ತಿ ಗೆಲ್ಲುವ ಸನಿಹ ಬಂದಿತ್ತು. ಆದರೆ, ಫೈನಲ್‌ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಸೋತಿತು. ಮೆಗಾ ಹರಾಜಿಗೂ ಮುನ್ನ ಬಲಿಷ್ಠ ಆಟಗಾರರನ್ನು ಉಳಿಸಿಕೊಂಡ ತಂಡವು, ಹರಾಜಿನಲ್ಲಿ ಮತ್ತಷ್ಟು ಆಟಗಾರರನ್ನು ತಂಡ ಸೇರಿಸಿಕೊಂಡಿತು. ಇಶಾನ್‌...