ಭಾರತ, ಏಪ್ರಿಲ್ 24 -- ಸ್ಯಾಂಡಲ್‌ವುಡ್‌ನಲ್ಲಿ ಈ ವಾರ ಕೆಲವೇ ಕೆಲವು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈಗಾಗಲೇ ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ಫ್ಲೈ ಸಿನಿಮಾ ರಿಲೀಸ್‌ ಆಗಿದೆ. ನಾಳೆ ಇನ್ನೂ ಮೂರು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ವಾರ ಒಟ್ಟು ನಾಲ್ಕು ಹೊಸ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಬಹುದು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಸಿನಿಮಾ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಇಂದು ಬಿಡುಗಡೆಯಾಗಿದೆ. ಫೈರ್ ಫ್ಲೈ ಸಿನಿಮಾವನ್ನು ಯುವ ನಟ ವಂಶಿ ನಿರ್ದೇಶಿಸಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಚಿತ್ರದ ನಾಯಕ- ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್‌.ಕೆ ಸಂಸ್ಥೆಯ ಮಾಯಾಬಜಾರ್ ಚಿತ್ರದಲ್ಲಿ ಸಹಾಯಕ ನಿರ...