ಭಾರತ, ಏಪ್ರಿಲ್ 21 -- ನವದೆಹಲಿ : ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು, ಉಕ್ಕು ಆಮದಿನ ಮೇಲೆ ಶೇ.12‌ ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ 12 ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನ್ನು ಸೋಮವಾರ (ಏಪ್ರಿಲ್ 21) ಕೈಗೊಂಡಿದೆ. ಇದಕ್ಕೆ ಸಂಬಂಧಿಸಿ ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ.

ಸುರಕ್ಷತಾ ಸುಂಕ ವಿಧಿಸಿರುವ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ. ಆಮದು ಹೆಚ್ಚಳದ ಪ್ರತಿಕೂಲಕರ ಪರಿಣಾಮಗಳಿಂದ ದೇಶೀಯ ಉಕ್ಕು ತಯಾರಕರನ್ನು ರಕ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಕ...