ಭಾರತ, ಮಾರ್ಚ್ 19 -- ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಮನಸೋಇಚ್ಛೆ ಹಲ್ಲೆ ನಡೆಸಿದ ಘಟನೆಯ ಕುರಿತ ವಿಡಿಯೊ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ಘಟನೆಯ ಗಂಭೀರತೆಯನ್ನು ಅರಿತ ಉಡುಪಿ ಪೊಲೀಸರು ಈ ಕುರಿತು ನಾಲ್ವರನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಗೆ ಹಲ್ಲೆ ನಡೆಸುವ ವೇಳೆ ಉಳಿದವರೂ ಸಪೋರ್ಟ್ ಮಾಡುತ್ತಿರುವುದನ್ನು ಕಂಡು ನಾಗರಿಕ ಸಮಾಜ ಎತ್ತ ಸಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ. ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ವಿಡಿಯೊದಲ್ಲಿರುವ ಇನ್ನೋರ್ವ ವ್ಯಕ್ತಿ (ಹೆಸರು ತಿಳಿದು ಬಂದಿಲ್ಲ) ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 18ರಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆ ಮೂಲದ ಮಹಿಳೆ ಮೀನು ಕದ್ದಿದ್ದಾಳೆ ಎಂದು ಹಲ್ಲೆ ನಡೆಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರ...