Mysuru, ಫೆಬ್ರವರಿ 24 -- ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ‌ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯಿಂದ ಇಂದು ಮೈಸೂರು ಚಲೋಗೆ ಕರೆ ನೀಡಿದ್ದು. ಇದಕ್ಕಾಗಿ ಬಿಜೆಪಿ ಹಿರಿಯ ನಾಯಕರು ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಗನ್ ಹೌಸ್ ವೃತ್ತದಿಂದ ಮೆರವಣಿಗೆ ಆರಂಭಿಸಿ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಸಾರ್ವಜನಿಕ ಸಭೆ ಆಯೋಜನೆ ಮಾಡಲು ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯಿಂದ ಸಿದ್ದತೆ ಸಮಿತಿ ಮಾಡಿಕೊಳ್ಳಲಾಗಿದೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ಕಾರಣ ನೀಡಿ ಮೈಸೂರು ನಗರ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡದೇ ನಿಷೇಧಾಜ್ಷೆ ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆ ಇದ್ದರೂ ಹೋರಾಟ ಮಾಡಿಯೇ ತೀರುತ್ತೇವೆ ಎಂದು ಸಮಿತಿಯವರು ಹಾಗೂ ಬಿಜೆಪಿ ನಾಯಕರು ಮೈಸೂರಿಗೆ ಆಗಮಿಸಿದ್ದು ಇದರಿಂದ ಗನ್ ಹೌಸ್ ಮತ್ತು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವನ್ನು ...