ಭಾರತ, ಫೆಬ್ರವರಿ 23 -- ಮೈಸೂರು : ಉದಯಗಿರಿ ಪೊಲೀಸ್ ಠಾಣೆ ಮೇಲೆ‌ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಂಸ್ಕೃತಿಕ ನಗರಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಘಟನೆ ಖಂಡಿಸಿ ನಾಳೆ (ಫೆ.24) ಜಾಗೃತಿ ಜನಾಂದೋಲನ ಜಾಥಾ ನಡೆಯುತ್ತಿದೆ. ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜಾಥಾ ಆಯೋಜನೆಯಾಗಿದೆ. ಅತ್ತ ದಲಿತ ಜಾಗೃತಿ ಮಹಾಸಭಾದಿಂದಲೂ ಸಮಾವೇಶ ಆಯೋಜನೆಯಾಗಿದೆ. ಆದರೆ, ಈ ಎರಡೂ ಸಂಘಟನೆಗಳಿಗೂ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರ ನಡುವೆಯೂ ನಾಳೆ ಜನಾಂದೋಲನ ಜಾಥಾಕ್ಕೆ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಾಳೆ ಮೈಸೂರು ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ ಕಾಯ್ದೆಯಡಿ ನಿಷೇಧಾಜ್ಞೆ ಜಾರಿಯಾಗಿದೆ. ಇಂದು (ಫೆ.23) ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೂ ಒಂದು ದಿನ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜಾರಿ ಮಾಡಿ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಯಾವು...