ಭಾರತ, ಜೂನ್ 19 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 22ರ ಭಾನುವಾರದಿಂದ 28ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸೋಮಾರಿತನದ ಕಾರಣ ಉತ್ತಮ ಅವಕಾಶವನ್ನು ಕಳೆದುಕೊಳ್ಳುವಿರಿ. ಮನಸ್ಸಿಗೆ ನೆಮ್ಮದಿ ಇರದು. ನಿಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚಲಿದೆ. ನಿಮಗೆ ಒಳ್ಳೆಯ ಮನಸ್ಸು ಗುಣಗಳಿದ್ದರೂ ಅತಿಯಾದ ಕೋಪ ಅದನ್ನುಮರೆ ಮಾಚುತ್ತದೆ. ಉನ್ನತ ಅಧಿಕಾರಿಗಳಿಗೆ ವಿಶೇಷ ಸವಲತ್ತುಗಳು ದೊರೆಯಲಿವೆ. ನಿಮ್ಮಲ್ಲಿ ಆವಿಷ್ಕಾರ ಮನೋಭಾವನೆ ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ ಉದ್ಯೋಗ ಸಂಸ್ಥೆಯ ಮೂಲಕ ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವಿರಿ. ವಿದ...