ಭಾರತ, ಜುಲೈ 23 -- ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ಕೊಟ್ಟು ಎರಡು ದಿನಗಳ ಬಳಿಕ, ಬುಧವಾರ (ಜುಲೈ 23) ಭಾರತೀಯ ಚುನಾವಣಾ ಆಯೋಗವು ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಯನ್ನು ಶುರುಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಮತದಾರರ ಯಾದಿ ರಚಿಸುವ ಪ್ರಕ್ರಿಯೆ ಶುರುಮಾಡಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.

ಉಪರಾಷ್ಟ್ರಪತಿ ಚುನಾವಣೆಯ ಮತದಾರರ ಯಾದಿಯಲ್ಲಿ ಸಂಸತ್ತಿನ ಉಭಯ ಸದನಗಳ ಸದಸ್ಯರು ಅಂದರೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಇದ್ದಾರೆ. ಅದೇ ರೀತಿ ಚುನಾಯಿತ ಹಾಗೂ ನಾಮ ನಿರ್ದೇಶಿತ ಸದಸ್ಯರು ಕೂಡ ಈ ಚುನಾವಣೆಯಲ್ಲಿ ಮತಚಲಾವಣೆ ಮಾಡುವ ಹಕ್ಕು ಹೊಂದಿರುತ್ತಾರೆ. ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಆಡಳಿತಾರೂಢ ಬಿಜೆಪಿ, ಎನ್‌ಡಿಎ ಹಾಗೂ ವಿಪಕ್ಷ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಸಂಖ್ಯಾ ಬಲ ಹೇಗಿದೆ ನೋಡೋಣ.

ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ. ಪ್ರಸ್ತುತ 543 ಸದಸ್ಯ ಬಲದ ಲೋಕಸಭೆಯಲ್ಲಿ ...