ಭಾರತ, ಜನವರಿ 29 -- ಬೆಂಗಳೂರು: ಪ್ರತಿವಾದಿಗಳಾದ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ತುಂಬಾ ಪ್ರಭಾವಿಗಳು ಮತ್ತು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಭಾವಿಸಿಕೊಂಡು ನೀವು ಐದು ವರ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಎರಡು ವಾರ ಸಮಯ ಕೊಡುತ್ತೇನೆ. ಅಷ್ಟರೊಳಗೆ ನಿಮ್ಮ ಕೈಲಿ ಆಗುವುದಾರೆ ತಿಳಿಸಿ, ಇಲ್ಲವೇ ಅಸಮರ್ಥರು ಎಂದಾದರೂ ಹೇಳಿ. ಆಗ ನಿಮ್ಮನ್ನು ಎಲ್ಲಿಗೆ ಕಳಿಸಬೇಕೊ ಅಲ್ಲಿಗೇ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ನೀವೆಲ್ಲರೂ ಸರಿಹೋಗುತ್ತೀರಿ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರಿಗೆ ಹೈಕೋರ್ಟ್‌ ಕಠಿಣ ಮಾತುಗಳಲ್ಲಿ ಎಚ್ಚರಿಕೆ ನೀಡಿದೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾ...