Bengaluru, ಮೇ 16 -- ಬೆಂಗಳೂರು: ವೈದ್ಯರು ಮತ್ತು ಶುಶ್ರೂಷಕರ ಕೊರತೆಯನ್ನು ನಿವಾರಿಸುವ ಪ್ರಯತ್ನವಾಗಿ, ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ ಎಂ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಶುಶ್ರೂಷಕರ ವೇತನವನ್ನು ಆರೋಗ್ಯ ಇಲಾಖೆಯು ಹೆಚ್ಚಳ ಮಾಡಿದೆ. ಆದರೆ ಇದು ಹೊಸದಾಗಿ ನೇಮಕವಾಗುವ ವೈದ್ಯರು ಹಾಗೂ ಶುಶ್ರೂಷಕರಿಗೆ ಮಾತ್ರ ಅನ್ವಯವಾಗಲಿದೆ.
ಎನ್ ಎಚ್ ಎಂ ಯೋಜನೆಯಡಿ ಮಂಜೂರಾಗಿದ್ದ 1,398 ಎಂಬಿಬಿಎಸ್ ವೈದ್ಯರ ಹುದ್ದೆಗಳಲ್ಲಿ 579 ಹುದ್ದೆಗಳು, 899 ತಜ್ಞ ವೈದ್ಯರ ಹುದ್ದೆಗಳಲ್ಲಿ 305 ಹುದ್ದೆಗಳು ಹಾಗೂ 9,041 ಶುಶ್ರೂಷಕರ ಹುದ್ದೆಗಳಲ್ಲಿ 936 ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿವೆ. 9,041 ಶುಷ್ರೂಷಕರ ಹುದ್ದೆಗಳಿದ್ದು, 8,105 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 936 ಹುದ್ದೆಗಳು ಖಾಲಿ ಉಳಿದಿವೆ. ಸರ್ಕಾರ ನೀಡುವ ವೇತನ ಕಡಿಮೆ ಎಂಬ ಕಾರಣಕ್ಕೆ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ. ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದರು. ಆದ್ದರಿಂದ ವೇತನ ಪರಿಷ್ಕರಿಸಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.