ಭಾರತ, ಏಪ್ರಿಲ್ 11 -- ಐಪಿಎಲ್‌ ಸೀಸನ್‌ 18ರಲ್ಲಿ ಏಪ್ರಿಲ್‌ 12ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿವೆ. ಮಧ್ಯಾಹ್ನ 3:30ಕ್ಕೆ ಆರಂಭವಾಗುವ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸಂಜೆ 7:30ಕ್ಕೆ ಆರಂಭವಾಗುವ ದಿನದ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಎದುರಾಗುತ್ತಿವೆ. ವಾರಾಂತ್ಯವಾಗಿರುವುದರಿಂದ ಎರಡು ಪಂದ್ಯಗಳನ್ನು ಸವಿಯುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ. ಎರಡೂ ಪಂದ್ಯಗಳ ಪಿಚ್‌ ಹಾಗೂ ಹವಾಮಾನ ವರದಿ ಇಲ್ಲಿದೆ.

ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣವು ಬೌಲರ್‌ಗಳಿಗೆ ನೆರವಾಗುವ ನಿರೀಕ್ಷೆ ಇದೆ. ಅದರಲ್ಲೂ ವಿಶೇಷವಾಗಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಲ್ಲರು. ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಲಕ್ನೋ ತಂಡ 200ರ ಗಡಿ ದಾಟುವಲ್ಲಿ ಯಶಸ್ವಿಯಾಗಿತ್ತು.‌ ಇಲ್ಲಿ ಟಾಸ್ ಗೆಲ್ಲುವ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡಿ ಸ್ಪರ್ಧಾತ್ಮಕ ರನ್‌ ಕಲೆಹಾಕಲು ಎದುರು ನೋಡುತ್ತಾರೆ. 180 ರನ್...