Bangalore, ಮೇ 2 -- ಬೆಂಗಳೂರು: ತಿಂಗಳ ಹಿಂದೆಯಷ್ಟೇ ನಡೆದಿದ್ದ ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆ 2025 ಫಲಿತಾಂಶವನ್ನು ಶುಕ್ರವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ.ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ಬಾರಿ ಶೇ 62.34 ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. 22 ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಪಡೆದುಕೊಂಡು ಟಾಪರ್‌ ಎನ್ನಿಸಿದ್ದಾರೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ. ಇವರಲ್ಲಿ ‌ ಕನ್ನಡ ಮತ್ತು ಉರ್ದು ಮಾಧ್ಯಮದ ಎರಡು ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದ್ದಾರೆ.

8,42,173 ಪರೀಕ್ಷೆ ಎದುರಿಸಿದ್ದರು. ಇದರಲ್ಲಿ ಉತ್ತೀರ್ಣರಾದವರು 524984(ಶೇ.62.34) ವಿದ್ಯಾರ್ಥಿಗಳು. ಮೊ...