ಭಾರತ, ಏಪ್ರಿಲ್ 22 -- ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವೆ 2025ರ ಐಪಿಎಲ್‌ನಲ್ಲಿ ಎರಡನೇ ಬಾರಿಗೆ ಮುಖಾಮುಖಿ ಪಂದ್ಯ ನಡೆಯುತ್ತಿದೆ. ಹೀಗಾಗಿ ಇದು ಸೇಡಿನ ಪಂದ್ಯ. ಏಪ್ರಿಲ್ 23ರ ಬುಧವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಸನ್‌ರೈಸರ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಇದೇ ಎಂಐ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋಲು ಕಂಡಿತ್ತು. ಮತ್ತೇ ಇದೇ ತಂಡವನ್ನು ತವರಿನಲ್ಲಿ ಎದುರಿಸಲು ಸಜ್ಜಾಗಿದೆ.

ಕಳೆದ ಆವೃತ್ತಿಯ ಫೈನಲಿಸ್ಟ್‌ ಆಗಿರುವ ಎಸ್‌ಆರ್‌ಎಚ್‌, ಈ ಬಾರಿ ಟೂರ್ನಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಸೋತು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಸದ್ಯ ಹೈದರಾಬಾದ್ ತಂಡವು ಟೂರ್ನಿಯಲ್ಲಿ ಉಳಿದಿರುವ ಎಲ್ಲಾ ಆರು ಪಂದ್ಯಗಳನ್ನು ಗೆದ್ದರೆ, ಪ್ಲೇಆಫ್‌ ಹಂತಕ್ಕೆ ಪ್ರವೇಶಿಸುವ ಭರವಸೆ ಉಳಿಸಿಕೊಳ್ಳಬಹುದು. ಒಂದು ಸೋಲು ಎದುರಾದರೂ, ತಂಡದ ಅವಕಾಶವನ್ನು ಬುಡಮೇಲು ಮಾಡುತ್ತದೆ....