Bengaluru, ಮೇ 2 -- ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣದ ಕುರಿತಾಗಿ ತೆಗೆದುಕೊಳ್ಳುವ ನಿರ್ಧಾರ, ಅವರ ವೃತ್ತಿ ಜೀವನವನ್ನು ರೂಪಿಸುವಲ್ಲಿ ಬಹಳ ಮಹತ್ವದ್ದಾಗಿರುತ್ತದೆ.. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಹಾಗೂ ಗುರಿಗಳನ್ನು ಆಧಾರವಾಗಿಟ್ಟುಕೊಂಡು ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳುವುದು ಅಗತ್ಯ... SSLC ನಂತರ PUC ಮಾಡಲು ಇಚ್ಛಿಸದೇ ಇರುವ ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿವೆ.. ಅವುಗಳಲ್ಲಿ ಕೆಲವು ವೃತ್ತಿಪರ ಹಾಗು ಭರವಸೆಯ ಕೋರ್ಸುಗಳ ವಿವರ ಇಲ್ಲಿದೆ.

ಭವಿಷ್ಯದಲ್ಲಿ ಇಂಜಿನಿಯರಿಂಗ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೂರು ವರ್ಷದ ಇಂಜಿನಿಯರಿಂಗ್ ಡಿಪ್ಲೋಮ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಇದರಲ್ಲಿ ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಆಟೋಮೊಬೈಲ್, ಕಂಪ್ಯೂಟರ್ ಇಂಜಿನಿಯರಿಂಗ್ ಹೀಗೆ ವಿವಿಧ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು.

ಇವು ಕೌಶಲ್ಯ ಆಧರಿತ ಕೋರ್ಸುಗಳಾಗಿವೆ. ಎಲೆಕ್ಟ್ರೀಷಿಯನ್, ಪ್ಲಂಬರ್, ಫಿಟ್ಟರ್, ವೆಲ್ಡರ್, ಫ್ಯಾಷನ್ ಟೆಕ್ನಾಲಜಿ...