Mysuru, ಫೆಬ್ರವರಿ 17 -- ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ ಒಂದರಲ್ಲಿ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ಮಗ, ವೃದ್ದ ತಾಯಿ, ಪತ್ನಿಯೊಂದಿಗೆ ವ್ಯಕ್ತಿ ಆತ್ಮಹತ್ಯೆಗೆ ಶರಣಾರಾಗಿದ್ದಾರೆ.ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ ಕುಶಾಲ್ (15) ಎಂದು ಗುರುತಿಸಲಾಗಿದೆ. ಮೈಸೂರಿನ ವಿಶ್ವೇಶ್ವರನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿರುವ ಘಟನೆ ಇದು. ಮೊದಲು ಚೇತನ್ ತನ್ನ ತಾಯಿ, ಪತ್ನಿ ಹಾಗು ಮಗನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಶಂಕೆ. ನಂತರ ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದಿದೆ.ಘಟನಾ ಸ್ಥಳಕ್ಕೆ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ಇನ್ಸ್‌ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ...