ಭಾರತ, ಫೆಬ್ರವರಿ 6 -- ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ನಕಲು ಹಾಗೂ ಅಕ್ರಮ ತಡೆಯಲು ಈ ವರ್ಷದಿಂದಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ತಂತ್ರಜ್ಞಾನ ಆಧಾರಿತ ಸಿಸಿಕ್ಯಾಮರಾಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಮುಂದಾಗಿದೆ. ಕಳೆದ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ ಕಾಸ್ಟಿಂಗ್ ವ್ಯವಸ್ಥೆ ಪರಿಚಯಿಸಿದ್ದ ಇಲಾಖೆ ಈ ಬಾರಿ ಮತ್ತೊಂದು ಹೆಜ್ಜೆಯನ್ನು ಮುಂದಿಟ್ಟು ರಾಜ್ಯಾದ್ಯಂತ ಸೂಕ್ಷ್ಮ ಹಾಗೂ ಅತೀಸೂಕ್ಷ್ಮ ಎಂದು ಗುರುತಿಸಲಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಅಳವಡಿಸಿರುವ ಸಿಸಿ ಕ್ಯಾಮೆರಾ ಅಳವಡಿಸಲಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಕರ್ನಾಟಕದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಅಳವಡಿಸುವುದಿಲ್ಲ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಗುರುತಿಸಿದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಹಾಗೂ ಬೆಂಗಳೂರು ನಗರದ ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ...