ಭಾರತ, ಫೆಬ್ರವರಿ 19 -- ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಎರಡು ಪ್ರಮುಖ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿದರೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸುತ್ತೋಲೆ ಪ್ರಕಟವಾಗಿದೆ.

ಕರ್ನಾಟಕದಲ್ಲಿ ಮಾರ್ಚ್‌ 01ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದೆ. ಅದು ಮುಗಿಯುತ್ತಿದ್ದಂತೆಯೇ ಮಾರ್ಚ್‌ 21ರಿಂದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಸಾಮಾನ್ಯವಾಗಿ ಪರೀಕ್ಷೆಗೆ ಹಾಜರಾಗಲು ಮಕ್ಕಳು ಇತರ ಶಾಲೆ ಅಥವಾ ವಿದ್ಯಾಸಂಸ್ಥೆಗಳಿಗೆ ಹೋಗಬೇಕಾಗುತ್ತದೆ. ದೂರದ ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ...