Bengaluru, ಮೇ 2 -- 2024-2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಹೊರಬಿದ್ದಿದೆ. ಈ ಬಾರಿಯೂ ದಕ್ಷಿಣ ಕನ್ನಡ ಪ್ರಥಮ ಮತ್ತು ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಜತೆಗೆ ಹುಡುಗಿಯರು ಈ ಸಲವೂ ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟಾರೆ ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ಶೇ. 66.1ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ. 8 ರಷ್ಟು ಹೆಚ್ಚಳವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ವರ್ಷ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ: ಸಿಬಿಎಸ್‌ಇ 10, 12 ನೇ ತರಗತಿ ಫಲಿತಾಂಶ ಇವತ್ತು ಘೋಷಣೆ ವದಂತಿ ತಳ್ಳಿಹಾಕಿದ ಮಂಡಳಿ: ಕಳೆದ ಮೂರು ವರ್ಷಗಳು ಈ ದಿನಾಂಕದಲ್ಲಿ ಘೋಷಣೆಯಾಗಿತ್ತು

ಮರುಪರೀಕ್ಷೆ ಯಾವಾಗ?

ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದವರಿಗೆ ...