ಭಾರತ, ಏಪ್ರಿಲ್ 16 -- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆ ಮುಗಿದು ಮೌಲ್ಯಮಾಪನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಮುಗಿದ ಬಳಿಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಈ ಸಲದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈ ಬಾರಿ ಮೇ ಮೊದಲ ವಾರದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಏಪ್ರಿಲ್ 16) ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜಿಲ್ಲಾ ಕೇಂದ್ರಗಳಲ್ಲಿ ಪ್ರಗತಿಯಲ್ಲಿದೆ. ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆ 1 ಕ್ಕೆ 15,881 ಶಾಲೆಗಳ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪರೀಕ್ಷೆ 1ರ ಫಲಿತಾಂ...