ಭಾರತ, ಮೇ 14 -- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರ್ಕಲ್ ಬೇಸ್‌ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಬ್ಯಾಂಕ್‌ನಲ್ಲಿ 2964 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. 2025ರ ಮೇ 9ರಿಂದ ಪ್ರಕ್ರಿಯೆ ಆರಂಭವಾಗಿದ್ದು, ಮೇ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಸೇರಿದಂತೆ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದೇ ವೇಳೆ ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಮುಂತಾದ ವಿದ್ಯಾರ್ಹತೆ ಹೊಂದಿರ...