ಭಾರತ, ಫೆಬ್ರವರಿ 22 -- ದುಬೈ: ಭಾರತ ಮತ್ತು ಪಾಕಿಸ್ತಾನದ (India vs Pakistan) ನಡುವಿನ ಪಂದ್ಯವೆಂದರೆ ಅದರ ಕ್ರೇಜ್‌ ದುಪ್ಪಟ್ಟು. ಜಾಗತಿಕ ಮಟ್ಟದಲ್ಲಿ ಕ್ರೀಡಾ ಅಭಿಮಾನಿಗಳನ್ನು ಬಡಿದೆಬ್ಬಿಸುವ ಶಕ್ತಿ ಈ ಎರಡು ತಂಡಗಳಿಗಿವೆ. ಉಭಯ ರಾಷ್ಟ್ರಗಳಲ್ಲಿ ಕ್ರಿಕೆಟ್‌ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, ಇದೀಗ ಮತ್ತೊಮ್ಮೆ ಇಂಡೋ-ಪಾಕ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ. ದುಬೈನಲ್ಲಿ ಫೆ.23ರ ಭಾನುವಾರ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ಉಭಯ ರಾಷ್ಟ್ರಗಳು ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಮುಖಾಮುಖಿಯಾಗುತ್ತಿದ್ದು, ಅಪರೂಪದ ಪಂದ್ಯಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ.

1947ರ ಭಾರತ-ಪಾಕಿಸ್ತಾನ ವಿಭಜನೆಯ ನಂತರ, ಎರಡು ದೇಶಗಳು 1952 ರಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿಯಲ್ಲಿ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾದವು. ಆಗ ಆತಿಥೇಯ ಭಾರತ 2-1 ಅಂತರದಲ್ಲಿ ಸರಣಿ ಗೆದ್ದಿತು. ಆ ನಂತರದಲ್ಲಿ ಉಭಯ ರಾಷ್ಟ್ರಗಳು ಆಗಾಗ ಅಭಿಮಾನಿಗಳ ರೋಚಕತೆ ಹೆಚ್ಚಿಸು...