ಭಾರತ, ಮಾರ್ಚ್ 12 -- ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬುಧವಾರ (ಮಾರ್ಚ್ 12) ನೂತನ ಏಕದಿನ ಶ್ರೇಯಾಂಕ ಬಿಡುಗಡೆ ಮಾಡಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಕೊನೆಗೊಂಡ ಬಳಿಕ ಬಿಡುಗಡೆಯಾದ ರ್‍ಯಾಂಕಿಂಗ್​ನಲ್ಲಿ ರೋಹಿತ್ ಶರ್ಮಾ 2 ಸ್ಥಾನ ಮೇಲೇರಿದ್ದಾರೆ. ಅವರು ವಿರಾಟ್ ಕೊಹ್ಲಿ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದ್ದಾರೆ. 'ಹಿಟ್​ಮ್ಯಾನ್' ಎಂದು ಖ್ಯಾತಿ ಪಡೆದಿರುವ ರೋಹಿತ್ ಖಾತೆಯಲ್ಲಿ ಪ್ರಸ್ತುತ 756 ರೇಟಿಂಗ್ ಪಾಯಿಂಟ್​​ಗಳಿವೆ.

ಕೊಹ್ಲಿ 736 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಹಿತ್​ 76 ರನ್​​ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದರೆ, ಕೊಹ್ಲಿ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದುಕೊಂಡಿತು.

ಆರಂಭಿಕ ಆಟಗಾರ ಶುಭ್ಮನ್ ಗಿಲ್ (784) ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೇವಲ 31 ರನ್​ಗಳ ಕೊಡುಗೆ ನೀಡಿದ...