ಭಾರತ, ಮಾರ್ಚ್ 10 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತ ತಂಡವನ್ನು ಟ್ರೋಫಿ ಗೆಲುವಿನತ್ತ ಮುನ್ನಡೆಸಿದ ನಾಯಕ ರೋಹಿತ್ ಶರ್ಮಾ (Rohit Sharma), ಸದ್ಯ ಕ್ರಿಕೆಟ್‌ಗೆ ವಿದಾಯ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಭಾರತದ ಪರ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರೆಸುವುದಾಗಿ ಹಿಟ್‌ಮ್ಯಾನ್‌ ಖಚಿತಪಡಿಸಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್‌ಗಳಿಂದ ಗೆದ್ದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್, ಇನ್ನೇನು ಸುದ್ದಿಗೋಷ್ಠಿ ಮುಗಿಸಿ ಕುರ್ಚಿಯಿಂದ ಏಳಬೇಕು ಎನ್ನುವಷ್ಟರಲ್ಲಿ ಈ ವಿಷಯದ ಬಗ್ಗೆ ಮಾತನಾಡಿದರು.

"ಇನ್ನೊಂದು ವಿಷಯ. ನಾನು ಈ ಸ್ವರೂಪದಿಂದ ನಿವೃತ್ತಿ ಪಡೆಯುತ್ತಿಲ್ಲ. ಮುಂದೆ ಯಾವುದೇ ವದಂತಿಗಳು ಹರಡಲ್ಲ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಹೇಳುತ್ತಿದ್ದೇನೆ. ಧನ್ಯವಾದಗಳು," ಎಂದು ರೋಹಿತ್ ಹೇಳಿದರು.

ಹಿಟ್‌ಮ್ಯಾನ್‌ ನಿರ್ಧಾರವು ಆಘಾತಕಾರಿ ಅಂತೂ ಅಲ್ಲ. ಚಾಂಪಿಯನ್ಸ...