ಭಾರತ, ಮಾರ್ಚ್ 24 -- ಮಹಾರಾಷ್ಟ್ರ: ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ದೇಶದ್ರೋಹಿ ಎಂದು ಟೀಕಿಸಿದ್ದಾರೆ. ಈ ವಿಚಾರವು ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಮಾತ್ರವಲ್ಲ, ಕಾರ್ಯಕ್ರಮ ಆಯೋಜಿಸಿದ್ದ ಸ್ಟುಡಿಯೊವನ್ನು ಶಿಂಧೆ ಬೆಂಬಲಿಗರು ಧ್ವಂಸ ಮಾಡಿದ್ದಾರೆ.
ಭಾನುವಾರ (ಮಾರ್ಚ್ 23) ಮುಂಬೈನ ಹ್ಯಾಬಿಟೇಟ್ ಕಾಮಿಡಿ ಕ್ಲಬ್ನಲ್ಲಿ ಕಾರ್ಯಕ್ರಮ ನೀಡುವ ವೇಳೆ ಕುನಾಲ್, ಶಿಂಧೆ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು. ಜೊತೆಗೆ ಆ ವಿಡಿಯೊ ತುಣಕನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದರು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರೊಚ್ಚಿಗೆದ್ದ ಶಿವಸೇನಾ ಕಾರ್ಯಕರ್ತರು ಕಮ್ರಾ ಅವರಿಗೆ ಬೆದರಿಕೆ ಹಾಕಿ, ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ಗೆ ದಾಳಿ ಮಾಡಿ ಸ್ಟುಡಿಯೊವನ್ನು ಧ್ವಂಸ ಮಾಡಿದ್ದಾರೆ.
ಅಲ್ಲದೇ ಈ ಕಾರ್ಯಕ್ರಮದಲ್ಲಿ ಕಮ್ರಾ ಮಹಾರಾಷ್ಟ್ರ ವಿಭಜನೆಯ ಕುರಿತು ಅಪಹಾಸ್ಯ ಮಾಡಿದ್ದರು. ಥಾಣೆಯಲ್ಲಿ ಗದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.