ಭಾರತ, ಮಾರ್ಚ್ 29 -- Shivakumara Swamiji Jayanti 2025: ಡಾ ಶಿವಕುಮಾರ ಸ್ವಾಮಿಗಳ 118ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಏಪ್ರಿಲ್ 1ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಯ ಕಾರ್ಯದರ್ಶಿ ಟಿ ಕೆ ನಂಜುಂಡಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವ ಹಿಸಲಿದ್ದಾರೆ. ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸಲಿ...