ಭಾರತ, ಏಪ್ರಿಲ್ 9 -- ಹುಬ್ಬಳ್ಳಿ: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಮಾಲೀಕರ ಹಾಗೂ ಏಜೆಂಟ್ಸ್ ಅಸೋಸಿಯೇಷನ್ ವತಿಯಿಂದ ಏ. 14ರ ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಿಸಲಾಗುವುದು ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ.ಜಿ.ಆರ್.ಷಣ್ಮುಗಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2024ಜೂನ್ ತಿಂಗಳಲ್ಲಿ ಡಿಸೇಲ್ ದರ 3ರೂ. ಹೆಚ್ಚಳ ಮಾಡಿದೆ. 2025 ಏ. 1ರಿಂದ ಏಕಾಏಕಿ ಡಿಸೇಲ್ ಮತ್ತೆ 2 ರೂ. ಹೆಚ್ಚಳ ಮಾಡಿದೆ. ಇದರಿಂದ ಲಾರಿ ಉದ್ಯಮದ ಮೇಲೆ ಬರೆ ಬಿದ್ದಿದೆ. ಹೊರರಾಜ್ಯದ ಲಾರಿಗಳು ನಮ್ಮ ರಾಜ್ಯದಲ್ಲಿ ಲಕ್ಷಾಂತರ ಲೀಟರ್ ಡಿಸೇಲ್ ತುಂಬಿಸಿ ಕೊಳ್ಳುತ್ತಿದ್ದವು. ದರ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಡಿಸೇಲ್ ದರವನ್ನು ಕೂಡಲೇ ಹಿಂದೆಪಡೆಯಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಒಟ್ಟಾರೆ 18 ರಾಜ್ಯ ಹೆದ್ದಾರಿ ಟೋಲ್ ಬೂತಗಳಿವೆ. ಅನಧಿಕೃತವಾಗಿ ವಾಹನಗಳಿಂದ ಶುಲ್ಕ ಸಂಗ್ರಹ ಮಾಡಲಾಗುತ್ತಿದೆ. ಚಾಲಕರಿಗೆ ಮೂಲಭೂತ ಸೌಕರ್ಯ ಹಾಗೂ ರಸ್ತೆ ಅಪಘಾತ ತಡೆಯದೇ, ಟೋಲ್ ಗಳಿಗೆ ಕೇವಲ ಬಣ...