Bengaluru, ಮೇ 2 -- ಬೆಂಗಳೂರು: ಐಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಸೂರ್ಯ ಮಧು ಬಂಗಾರಪ್ಪ ವಿಜ್ಞಾನ ವಿಭಾಗದಲ್ಲಿ ಶೇಕಡ 98.25 ಅಂಕ ಗಳಿಸಿದ್ದಾರೆ. ಬೆಂಗಳೂರಿನ ಬಿಷಪ್ ಕಾಟನ್‌ ಸ್ಕೂಲ್‌ನಲ್ಲಿ ಟಾಪರ್ ಎನಿಸಿಕೊಂಡಿದ್ದಾರೆ. ಬಿಷಪ್ ಕಾಟನ್‌ ಸ್ಕೂಲ್‌ನ ಆರ್ಯನ್ ಅಜ್ಮೀರ್ ಶೇಕಡ 95.50 ಅಂಕ, ಶಯಕ್‌ದಾಸ್ ಶೇಕಡ 93.50 ಅಂಕ ಪಡೆದು ನಂತರದ ಸ್ಥಾನದಲ್ಲಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದು, ತಮ್ಮ ಪುತ್ರನ ಸಾಧನೆಯ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. 'ನನ್ನ ಮಗ, ಸೂರ್ಯ ಮಧು ಬಂಗಾರಪ್ಪ ಐಸಿಎಸ್ಸಿ 12ನೇ ತರಗತಿಯ ಪರೀಕ್ಷೆಯಲ್ಲಿ 98.25% ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಬಿಷಪ್ ಕಾಟನ್ ಶಾಲೆಗೆ ಮೊದಲನೇ ರ‍್ಯಾಂಕ್ ಪಡೆದಿದ್ದಾನೆ ಎಂದು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ. ಇದು ಅವನ ಶ್ರಮ, ಸಮರ್ಪಣೆ ಮತ್ತು ದೃಢ ಸಂಕಲ್ಪಕ್ಕೆ ಸಿಕ್ಕಿರುವ ಫಲ. ಅವನ ಈ ಸಾಧನೆಗೆ ನಾನು ಹೆಮ್ಮೆಪಡುತ್ತೇನೆ ಮತ್ತು ಅವನ ಉಜ್ವಲ ಭವ...