ಭಾರತ, ಜುಲೈ 23 -- ಇಂಗ್ಲೆಂಡ್ ವಿರುದ್ಧ ಜರುಗುತ್ತಿರುವ ಪ್ರತಿಷ್ಠಿತ ಆ್ಯಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಮ್ಯಾಂಚೆಸ್ಟರ್​​ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 46 ರನ್ ಗಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಪ್ರಸಕ್ತ ಸರಣಿಯಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ರಾಹುಲ್ ಅವರು ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸೇರಿದಂತೆ ಟೆಸ್ಟ್​ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್‌ ನೆಲದಲ್ಲಿ 1000 ರನ್​​ಗಳ ಮೈಲಿಗಲ್ಲು ಸಾಧಿಸುವ ಮೂಲಕ ಕೆಎಲ್ ರಾಹುಲ್ ಇತಿಹಾಸ ಸೃಷ್ಟಿಸಿ ದಾಖಲೆ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಆಂಗ್ಲರ ನೆಲದಲ್ಲಿ 1,000ಕ್ಕೂ ಹೆಚ್ಚು ಟೆಸ್ಟ್ ರನ್ ಗಳಿಸಿದ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಕೆಎಲ್ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಮತ್ತು ಸುನಿಲ್ ಗವಾಸ್ಕರ್ ಅವರಂತಹ ಐಕಾನ...