ಭಾರತ, ಜೂನ್ 3 -- ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅತಿ ಹೆಚ್ಚು ಫೈನಲ್ ಆಡಿದ ನಾಯಕ ಎಂಬ ಹೆಗ್ಗಳಿಕೆಗೆ ಎಂಎಸ್ ಧೋನಿ ಪಾತ್ರರಾಗಿದ್ದಾರೆ. ಧೋನಿ ತಮ್ಮ ವೃತ್ತಿಜೀವನದಲ್ಲಿ 10 ಐಪಿಎಲ್​ ಫೈನಲ್ ಆಡಿದ್ದಾರೆ. ಅವರ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ಟ್ರೋಫಿಗಳನ್ನು ಗೆದ್ದಿದೆ. ಇದು ಐಪಿಎಲ್​​ನಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ​ ಜಂಟಿ ದಾಖಲೆಯಾಗಿದೆ.

ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು ನಾಯಕನಾಗಿ 5 ಐಪಿಎಲ್ ಫೈನಲ್ ಪಂದ್ಯಗಳನ್ನು ಆಡಿದ್ದಾರೆ. ಹಿಟ್​​ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. 2023ರವರೆಗೆ ಮುಂಬೈ ನಾಯಕತ್ವ ವಹಿಸಿದ್ದರು.

ಪಂಜಾಬ್ ಕಿಂಗ್ಸ್​ ತಂಡವನ್ನು ಫೈನಲ್​ಗೇರಿಸುವ ಮೂಲಕ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನಕ್ಕೇರಿದ್ದಾರೆ. ಅಯ್ಯರ್ ನಾಯಕನಾಗಿ 3 ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದ್ದಾರೆ. ಅವರು ಕೋಲ್ಕತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದರು. ...