ಭಾರತ, ಮೇ 9 -- ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ಕಾರಣ 18ನೇ ಆವೃತ್ತಿಯ ಐಪಿಎಲ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಒಂದು ವಾರದ ತನಕ ಈ ರದ್ದು ಮುಂದುವರೆಯಲಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.
ಮೇ 8ರಂದು ರಾತ್ರಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಭಾರತೀಯ ಸೇನೆಯ ಆದೇಶದ ಕಾರಣ ನಿರ್ಧಾರ ಕೈಗೊಳ್ಳಲಾಯಿತು. ಪಂದ್ಯವು 10.1 ಓವರ್ಗಳ ತನಕ ನಡೆದಿತ್ತು.
ಜಮ್ಮು, ಕಾಶ್ಮೀರ, ರಾಜಸ್ಥಾನ ಸೇರಿದಂತೆ ಪಾಕ್ ಗಡಿ ಭಾಗದ ರಾಜ್ಯಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಉಭಯ ದೇಶಗಳ ನಡುವೆ ದಾಳಿ-ಪ್ರತಿದಾಳಿ ನಡೆಸಿತ್ತು. ಪಾಕ್ ನಡೆಸಿದ್ದ ಕ್ಷಿಪಣಿ, ಡ್ರೋನ್ಗಳು ಮತ್ತು ಯುದ್ಧವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಇದೀಗ ರದ್ದಾದ ಪಂದ್ಯದ ಜತೆಗೆ ಫೈನಲ್ ಸೇರಿ ಒಟ್ಟು 16 ಪಂದ್ಯಗಳು ಬಾಕಿ ಉಳಿದಿವೆ. ಈಗಾಗಲೇ ಎಲ್ಲಾ ತಂಡಗಳು 11 ಮತ್ತು 12 ಪಂದ್ಯಗಳನ್ನು ಆಡಿವೆ. ಅಂಕಪಟ್ಟಿಯಲ್ಲಿ ಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.